ತುಂಬೆ ಪ್ರಕಾಶ್ ಶೆಟ್ಟಿಯವರಿಗೆ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡುವಂತೆ ಯುವ ಕಾಂಗ್ರೆಸ್ ಮುಖಂಡ ಶಂಸುದ್ದೀನ್ ಅಜ್ಜಿನಡ್ಕ ಆಗ್ರಹ
ಮಂಗಳೂರು: ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರನ್ನು ದ.ಕ.ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ದ.ಕ ಜಿಲ್ಲಾ ಯೂತ್ ಕಾಂಗ್ರೆಸ್ ನಾಯಕ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಆಗ್ರಹಿಸಿದ್ದಾರೆ
ಕಳೆದ ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕನಾಗಿ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಮತ್ತು ನಿರ್ಣಾಯಕ ಪಾತ್ರ ವಹಿಸಿರುವ ಪ್ರಕಾಶ್ ಶೆಟ್ಟಿ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗಟ್ಟಿ ಮಾಡುವ ಪ್ರಯತ್ನವನ್ನು ಕೆಪಿಸಿಸಿ ಅಧ್ಯಕ್ಷರು ಮಾಡಬೇಕು ಎಂದು ಯೂತ್ ಕಾಂಗ್ರೆಸ್ ನಾಯಕ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಆಗ್ರಹಿಸಿದ್ದಾರೆ