ರಾಜ್ಯರಾಷ್ಟ್ರೀಯ

ವಿಮಾನದಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್; ವಿಡಿಯೋ ವೈರಲ್​​

ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸಂಸ್ಕೃತದಲ್ಲಿ ಅನೌನ್ಸ್ಮೆಂಟ್ ನೀಡಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋದಲ್ಲಿ ಸೂಚನೆಗಳನ್ನು ಸಂಸ್ಕೃತದಲ್ಲಿ ಹೇಳುತ್ತಿರುವುದನ್ನು ಕಾಣಬಹುದು. ಆದರೆ ಈ ವಿಡಿಯೋ ನಿಜವಲ್ಲ, ಸಂಸ್ಕೃತದಲ್ಲಿ ಡಬ್ಬಿಂಗ್ ಮಾಡಿ ವಿಡಿಯೋ ಎಡಿಟ್ ಮಾಡಲಾಗಿದೆ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ.

@MumbaichaDon ಎಂಬ ಟ್ವಿಟರ್​ ಖಾತೆಯಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್ ನೀಡುತ್ತಿರುವ ವೀಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಇಂದು(ಡಿ.05) ಬೆಳಿಗ್ಗೆ ಹಂಚಿಕೊಂಡಿರುವ ವಿಡಿಯೋ ಈಗಾಗಲೇ 22 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Leave a Reply

Your email address will not be published. Required fields are marked *

error: Content is protected !!