ದರ್ಶನ್ ಜಾಮೀನು ಅರ್ಜಿ, ವಿಚಾರಣೆ ಮತ್ತೆ ಮುಂದೂಡಿಕೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನು ಕೆಲವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದ್ದು, ಕಳೆದ ಕೆಲ ದಿನಗಳಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ದರ್ಶನ್ರ ಕಾರು ಚಾಲಕನ ಪರವಾಗಿ ವಕೀಲರುಗಳು ತಮ್ಮ ವಾದಗಳನ್ನು ಮಂಡಿಸಿದ್ದಾರೆ.
ಇಂದು (ಡಿಸೆಂಬರ್ 06) ತನಿಖಾಧಿಕಾರಿಗಳ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಡಿಸೆಂಬರ್ 09 (ಸೋಮವಾರ) ಮಧ್ಯಾಹ್ನ 2:30ಕ್ಕೆ ಮುಂದೂಡಿದರು.