ಎಸ್ಎಂ ಕೃಷ್ಣ ನಿಧನ ಹಿನ್ನೆಲೆ: ಡಿ.11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಡಿಸೆಂಬರ್ 11) ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.