ಕರಾವಳಿಕ್ರೈಂ

ಉಪ್ಪಿನಂಗಡಿ: ಕಾರ್ಮಿಕನ ಕೊಲೆ  ಪ್ರಕರಣ; ಆರೋಪಿ ಬಂಧನ

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿಯ ಗ್ರಾಮ ಪಂಚಾಯತ್ ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಗ್ರಂಥಾಲಯ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ದೀಪಕ್ ಬೆಂಗರ (34ವ.) ಎಂಬವರ ಕೊಲೆ ಪ್ರಕರಣದ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಬಾಬು ಯಾನೆ ರುದ್ರ(68 ವ.) ಬಂಧಿತ ಆರೋಪಿ. ಈತನನ್ನು ಉಳ್ಳಾಲ ತಾಲ್ಲೂಕಿನ ದೇರಳಕಟ್ಟೆ ಎಂಬಲ್ಲಿಂದ ವಶಕ್ಕೆ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರರವರ ನಿರ್ದೇಶನದಂತೆ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ಗೌಡರವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ರವರ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಅವಿನಾಶ್ ಹೆಚ್, ಸಿಬ್ಬಂದಿಗಳಾದ ಶಿವರಾಮ್, ಹಿತೋಷ್, ಗಿರೀಶ್, ರಾಮಣ್ಣ ಗೌಡ, ಹೇಮರಾಜ್, ಮಹದೇವ, ನಾಗರಾಜ್, ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂದಿ ಪ್ರವೀಣ್ ರೈ, ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿ ಹರಿಶ್ಚಂದ್ರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ದಿವಾಕರ್‌ರವರ ವಿಶೇಷ ತಂಡದವರು ಆರೋಪಿಯನ್ನು ದಸ್ತಗಿರಿ ಮಾಡಿದ್ದು ಪ್ರಕರಣದ ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

error: Content is protected !!