ರಾಷ್ಟ್ರೀಯ

ಕೆ ಆರ್ ಎಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್ ಲಿಂಗೇಗೌಡ ಅಪಘಾತದಲ್ಲಿ ಮೃತ್ಯು

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಐದು ಜನರ ತಂಡ ಮಂಗಳೂರಿನಿಂದ ದೆಹಲಿಗೆ  ಪಾದಯಾತ್ರೆ ಹೊರಟಿತ್ತು. ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ನೀಡಲು ಈ ತಂಡ ಯಾತ್ರೆ ಹಮ್ಮಿಕೊಂಡಿತ್ತು. 55ನೇ ದಿನದ ಪಾದಯಾತ್ರೆಯು ಗುಜರಾತಿನ ಭರೂಚ್ ಎನ್ನುವ ನಗರ ತಲುಪಿದ ವೇಳೆ
ಪಾದಯಾತ್ರೆಯಲ್ಲಿದ್ದವರಿಗೆ ನೈತಿಕ ಬೆಂಬಲ ನೀಡಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರೂ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭರೂಚ್ ನಗರದ ಬಳಿಯ ಹೆದ್ದಾರಿಯಲ್ಲಿ ಲಾರಿಯೊಂದು ಪಾದಯಾತ್ರಿಗಳ ಮೇಲೆ ಹರಿದು, KRS ಪಕ್ಷದ ಕಾರ್ಯಾಧ್ಯಕ್ಷ ಎಸ್.ಎಚ್. ಲಿಂಗೇಗೌಡ ಮತ್ತು ಮಂಗಳೂರಿನ ಕುಂಞಿ ಮೂಸಾ ಮೃತಪಟ್ಟಿದ್ದಾರೆ.

ನಾಲ್ಕು ಜನರಿಗೆ ತೀವ್ರ ಗಾಯಗಳಾಗಿವೆ. ಅವರು ಭರೂಚ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾನೂನು ಪ್ರಕ್ರಿಯೆಗಳನ್ನು ಶೀಘ್ರ ಮುಗಿಸಿ ಮೃತದೇಹಗಳನ್ನು ರಾಜ್ಯಕ್ಕೆ ವಾಪಸು ತರುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಗುಜರಾತ್ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!