ಕರಾವಳಿಕ್ರೈಂ

ಉಳ್ಳಾಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ಮಂಗಳೂರು: ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಡಿ.7ರಂದು ರಾತ್ರಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಆಕಸ್ಮಿಕ ಸಂಭವಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಡಿ. 12ರ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಕಳೆದ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಿಂದ ಈ ದುರಂತ ಸಂಭವಿಸಿತ್ತು. ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಗಂಭೀರ ಗಾಯಗೊಂಡಿದ್ದರು.
ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!