ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಜಾಮೀನು ನೀಡಿದ ಹೈಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್ ಪೀಠ ಆದೇಶಿಸಿದೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಡಿ.13ರಂದು ಆದೇಶ ನೀಡಿದೆ.
ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಗೆಳತಿ ಪವಿತ್ರಾ ಗೌಡ, ನಾಗರಾಜ್, ಅನುಕುಮಾರ್, ಲಕ್ಷ್ಮಣ್, ಜಗದೀಶ್, ಪ್ರದೋಷ್ ಗೆ ಇದೀಗ ಜಾಮೀನು ದೊರೆತಿದೆ. ಸುಮಾರು ಆರು ತಿಂಗಳ ಬಳಿಕ ಜಾಮೀನು ದೊರೆತಿದೆ.
ಅನಾರೋಗ್ಯದ ಕಾರಣದಿಂದ ನಟ ದರ್ಶನ್ ಅವರಿಗೆ ಈಗಾಗಲೇ ಮಧ್ಯಂತರ ಜಾಮೀನು ಮಂಜೂರಾಗಿತ್ತು.