ಕಬಡ್ಡಿ ಆಟಗಾರ ಹೆಬ್ರಿ ತಾಲೂಕಿನ ಮುನಿಯಾಲುವಿನ ಮುಟ್ಲುಪಾಡಿಯ ನಡುಮನೆ ಪ್ರೀತಂ ಶೆಟ್ಟಿ (26) ಡಿ. 13ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಬಡ್ಡಿ ಆಡಿದ ನಂತರ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸುವ ವೇಳೆಗಾಗಲೇ ಪ್ರೀತಂ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.