ವಕ್ಫ್ ಆಸ್ತಿ ಕಬಳಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ
ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದ್ದು ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
‘ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಕಳಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಡಂಗೂರ ಸಾರುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.