ಯುವ ಕ್ರಿಕೆಟ್ ಆಟಗಾರ ನೇಣು ಬಿಗಿದು ಆತ್ಮಹತ್ಯೆ
ಯುವ ಕ್ರಿಕೆಟ್ ಆಟಗಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು ಕಾಪು ಉದ್ಯಾವರ ಕೇದಾರ್ ಬೊಳ್ಜೆ ನಿವಾಸಿ, ಆದಿತ್ಯ (24ವ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ನ ಹೆಸರಿನಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿಕೊಂಡಿದ್ದ ಆದಿತ್ಯ ಶನಿವಾರ ರಾತ್ರಿ ಪೆರಂಪಳ್ಳಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ತನ್ನ ತಂಡದೊಂದಿಗೆ ಭಾಗವಹಿಸಿದ್ದ. ರವಿವಾರ ಮುಂಜಾನೆ 3 ಗಂಟೆಗೆ ಮನೆಗೆ ಬಂದ ಬಳಿಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಬೆಳಗ್ಗೆ ಅಜ್ಜಿ ಬಾಗಿಲು ಬಡಿದಾಗ, ಬಾಗಿಲು ತೆರೆಯದೇ ಇದ್ದು ಕಿಟಕಿಯಿಂದ ಇಣುಕಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.