ಬಸ್-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಪುತ್ತೂರು: ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ನಿವಾಸಿ ಮಾಧವ ಆಚಾರಿ(52ವ) ಎಂದು ಗುರುತಿಸಲಾಗಿದೆ.
ಆಂಧ್ರಪ್ರದೇಶದಿಂದ ಅಯ್ಯಪ್ಪ ವ್ರತಧಾರಿಗಳನ್ನು ಶಬರಿಮಲೆ ಯಾತ್ರೆಗೆ ಕರೆದೋಯ್ಯುವ ಖಾಸಗಿ ಬಸ್ಸು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದು, ಬೈಕ್ ಸವಾರ ಕೊಕ್ಕಡದಿಂದ ಕಾಪಿನಬಾಗಿಲಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತ ದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು