ಕಾಂಗ್ರೆಸ್ ಪಕ್ಷವನ್ನು ನಿಷೇಧಿಸಬೇಕು ಎಂದ ನಳಿನ್ ಕುಮಾರ್ ಕಟೀಲ್
ಬೆಳಗಾವಿ: ‘ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧ ಮಾಡಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಲ್ಲಿ ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳಿಗೆ ಕಾಂಗ್ರೆಸ್ ಬೆಂಬಲ ಹಾಗೂ ಶಕ್ತಿ ಕೊಟ್ಟಿದೆ’ ಎಂದು ಅವರು ಆರೋಪಿಸಿದರು.
‘ಕಾಂಗ್ರೆಸ್ ಸ್ವಾತಂತ್ರ್ಯಾನಂತರ ದೇಶದಲ್ಲಿ ಆಡಳಿತ ಮಾಡಿದರೆ ಈ ದೇಶ ಹಾಳು ಮಾಡುತ್ತದೆ ಎಂದು ಮಹಾತ್ಮ ಗಾಂಧಿಯವರಿಗೆ ಗೊತ್ತಿತ್ತು. ಆದ್ದರಿಂದಲೇ ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲಿ ಎಂದು ಅವರು ಹೇಳಿದ್ದರು’ ಎಂದು ವಾಗ್ದಾಳಿ ನಡೆಸಿದರು.