ಕರಾವಳಿಕ್ರೈಂ

ಬಂಟ್ವಾಳ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ

ಬಂಟ್ವಾಳ:  ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಡಿ.17ರಂದು ನಡೆದಿದೆ.

ಬಂಟ್ವಾಳ ತಾಲೂಕು, ಬಡಗಬೆಳ್ಳೂರು ಗ್ರಾಮದ, ಬಡಗಬೆಳ್ಳೂರು ಎಂಬಲ್ಲಿ ನಿಶಾಂತ್ ಎಂಬವರ ಮನೆಯಲ್ಲಿ ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದಾಗ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ ರವರು ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದ್ದು ಈ ವೇಳೆ ಸ್ಥಳದಲ್ಲಿ ಅಕ್ರಮವಾಗಿ “ಉಲಾಯಿ-ಪಿದಾಯಿ”ಎಂಬ ಜುಗಾರಿ ಆಟ ಆಡುತ್ತಿರುವುದು ಕಂಡು ಬಂದಿದೆ.

ದಾಳಿ ವೇಳೆ ಜುಗಾರಿ ಆಟ ಆಡಿಸುತ್ತಿದ್ದ ಆರೋಪಿ ನಿಶಾಂತ್ ತಪ್ಪಿಸಿಕೊಂಡಿದ್ದು, ಆಟದಲ್ಲಿ ನಿರತರಾಗಿದ್ದ ಒಟ್ಟು 33 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅವರಿಂದ ಜುಗಾರಿ ಆಟಕ್ಕೆ ಬಳಸಿದ ನಗದು ರೂ. 7,81,420/-, ಇಸ್ಪೀಟ್ ಎಲೆಗಳು, ಸ್ಟೀಲ್ ಟೇಬಲ್, ಪ್ಲಾಸ್ಟಿಕ್ ಚೆಯರ್ ಹಾಗೂ ಇತರೆ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ. ಸ್ವಾಧೀನಪಡಿಸಿದ ಸ್ವತ್ತುಗಳ ಒಟ್ಟು ಮೌಲ್ಯ ರೂ.7,90,220/- ಆಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 112/2024 ಕಲಂ: 79,80 ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!