ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಸಮಿತಿಯಲ್ಲಿ ಸಿಗದ ಸ್ಥಾನ: ಬೂತ್ ಅಧ್ಯಕ್ಷ ಸುದೇಶ್ ರಾಜೀನಾಮೆ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ಘೋಷಣೆಯಾಗಿದ್ದು ತನಗೆ ಸಮಿತಿಯಲ್ಲಿ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸುದೇಶ್ ಕುಮಾರ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ. ಅವರು ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವರವರಿಗೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.
ತಾನು ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ ಕೊಂಬೆಟ್ಟು ವಾರ್ಡ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಎಲ್ಲಾ ಚಟುವಟಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ಪಕ್ಷದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದೇನೆ. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಸಲ್ಲಿಸಿದ್ದು, ಪ್ರಬಲ ಆಕಾಂಕ್ಷಿಯೂ ಆಗಿದ್ದೆ, ದೇವಸ್ಥಾನದ ಪ್ರತಿಯೊಂದು ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಆದರೂ ನನ್ನನ್ನು ಆಯ್ಕೆ ಮಾಡದ ಹಿನ್ನಲೆ ಬೇಸರದಿಂದ ಪಕ್ಷದ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.