ಫರಂಗಿಪೇಟೆ: ಟಯರ್ ಬ್ಲಾಸ್ಟ್ ಆಗಿ ಟೆಂಪೋ ಟ್ರಾವೆಲರ್ ಪಲ್ಟಿ
ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಇಂದು (ಡಿ.29) ಮುಂಜಾನೆ ನಡೆದಿದೆ.
ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ ಟಯರ್ ಬ್ಲಾಸ್ಟ್ ಆಗಿ ದುರ್ಘಟನೆ ಸಂಭವಿಸಿದೆ.
ವಾಹನದಲ್ಲಿದ್ದ ಹನ್ನೊಂದು ಮಂದಿ ಡೆಕೋರ್ ಕಾರ್ಮಿಕರು ಅದೃಷ್ಟವಶಾತ್ ಯಾವುದೇ ಗಾಯಗಳಾಗದೇ ಪಾರಾಗಿದ್ದಾರೆ. ವಾಹನ ರಸ್ತೆಗೆ ಮಗುಚಿ ಬಿದ್ದು ಅಲಂಕಾರಿಕ ಹೂ ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿದೆ.