ಪುತ್ತೂರು: ಬಸ್-ಬೈಕ್ ಅಪಘಾತ; ಬೈಕ್ ಸವಾರ ಸಾವು
ಪುತ್ತೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರಿನ ಮುರ ಎಂಬಲ್ಲಿ ಡಿ. 19ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಪಡ್ನೂರು ಗ್ರಾಮದ ಅಬ್ದುಲ್ ಕುಂಞಿ(65.ವ) ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಬೈಕ್ ನಜ್ಜು ಗುಜ್ಜಾಗಿದೆ. ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ