ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಆರೋಪ: ಸಿಟಿ ರವಿ ಅರೆಸ್ಟ್
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಯವರನ್ನು ಬಂಧಿಸಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ.