ಸರ್ವೆ: ಭಕ್ತಕೋಡಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿದ ಕಳ್ಳರು
ಪುತ್ತೂರು: ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ಹಣ ಕಳ್ಳತನವಾದ ಘಟನೆ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಡಿ. 20ರಂದು ನಡೆದಿದೆ. ಹಾಡ ಹಾಗಲೇ ಈ ಕಳ್ಳತನ ಕೃತ್ಯ ನಡೆದಿದೆ.

ಭಕ್ತಕೋಡಿ ಸರಕಾರಿ ಆಸ್ಪತ್ರೆ ಬಳಿಯ ಕಿಶೋರ್ ಎಂಬವರ ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿದ ಕಳ್ಳರು ಮನೆಯ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ. ಸುಮಾರು 11 ಪವನ್ ಚಿನ್ನ ಕಳ್ಳರ ಪಾಲಾಗಿದೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೃತ್ಯ ನಡೆದಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.