ರಾಷ್ಟ್ರೀಯ

ಮಂದಿರ-ಮಸೀದಿ ವಿವಾದಗಳು ಹೆಚ್ಚುತ್ತಿರುವ ಬಗ್ಗೆ  ಕಳವಳ ವ್ಯಕ್ತಪಡಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ನವದೆಹಲಿ: ಇತ್ತೀಚಿಗೆ ಮಂದಿರ-ಮಸೀದಿ ವಿವಾದಗಳು ಗಣನೀಯವಾಗಿ ಹೆಚ್ಚುತ್ತಿರುವ ಬಗ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮಮಂದಿರ ನಿರ್ಮಾಣ ಬಳಿಕ ಇಂತಹ ವಿವಾದಗಳನ್ನೇ ಸೃಷ್ಟಿಸಿ ತಾವು ಕೂಡ ಹಿಂದೂ ಮುಖಂಡರೆನಿಸಿಕೊಳ್ಳಬಹುದು ಎಂದು ಕೆಲವರು ಭಾವಿಸಿದ್ದಾರೆ. ಆದರೆ, ಇದು ತಮಗೆ ಒಪ್ಪಿತವಲ್ಲ. ಇದು ಸರಿಯಲ್ಲ ಎಂದು ಮೋಹನ್ ಭಾಗವತ್ ಸ್ಪಷ್ಟಪಡಿಸಿದ್ದಾರೆ.

ನಿತ್ಯವೂ ಒಂದು ಹೊಸ ವಿವಾದ ಸೃಷ್ಟಿಸ್ತಿದ್ದಾರೆ. ಇವುಗಳನ್ನು ಹೇಗೆ ಒಪ್ಪಲು ಸಾಧ್ಯ? ಇದು ಮುಂದುವರೆಯಬಾರದು. ನಮ್ಮ ದೇಶ ಸಾಮರಸ್ಯದಿಂದ ಕೂಡಿದೆ ಎಂಬುದನ್ನು ವಿಶ್ವಕ್ಕೆ ಸಾರಿ ಹೇಳಬೇಕು ಎಂದು ಪ್ರತಿಪಾದಿಸಿದ್ದಾರೆ. ತಾವು ಹಿಂದೂಗಳಾಗಿರುವ ಕಾರಣ ರಾಮಕೃಷ್ಣ ಆಶ್ರಮದಲ್ಲಿ ಕ್ರಿಸ್ಮಸ್ ಆಚರಿಸ್ತಿದ್ದೇವೆ ಎಂದಿದ್ದಾರೆ.

ಮೋಹನ್ ಭಾಗವತ್ ಹೇಳಿಕೆಯನ್ನು ರಾಮಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಸಮರ್ಥಿಸಿದ್ದಾರೆ. ನಾಯಕರಾಗುವ ಉದ್ದೇಶದಿಂದ ಕೋಮು ವಿವಾದ ಸೃಷ್ಟಿಸೋದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!