ಕುಂಬ್ರ: ಟೆಂಪೋ- ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಾಯ
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆಯಲ್ಲಿ ಟೆಂಪೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಡಿ.24ರಂದು ಸಂಜೆ ನಡೆದಿದೆ.

ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್ ಶೇಖಮಲೆಯಲ್ಲಿ ಬೊಳ್ಳಾಡಿಗೆ ತಿರುವು ಪಡೆದುಕೊಳ್ಳುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೆಳಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.