ಸುಳ್ಯ: ಸಂಪಾಜೆ ಬಳಿ ಭೀಕರ ಅಪಘಾತ; ಇಬ್ಬರು ಮೃತ್ಯು
ಸುಳ್ಯ: ಸಂಪಾಜೆಯ ಚೆಡಾವು ಬಳಿ ಕಂಟೈನರ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರರಿಬ್ಬರು ಮೃತಪಟ್ಟ ದಾರುಣ ಘಟನೆ ಇಂದು ಸಂಜೆ ನಡೆದಿದೆ

ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಹಾಗೂ ಸಿದ್ಧಾಪುರದಿಂದ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿಗೆ ಢಿಕ್ಕಿ ಸಂಪಾಜೆ ಕೊಯನಾಡಿನ ಚೆಡಾವು ಬಳಿ ಡಿಕ್ಕಿಯಾಗಿದೆ. ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟರೇ ಗಂಭೀರ ಗಾಯಗೊಂಡ ಸಹಸವಾರೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.