ಸಿ.ಟಿ. ರವಿ ಅಶ್ಲೀಲ ಪದ ಬಳಸಿಲ್ಲ ಎಂದಾದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ –ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು
ಬೆಂಗಳೂರು: ಎಂಎಲ್ಸಿ ಸಿ. ಟಿ ರವಿಯವರು ನನ್ನ ಬಗ್ಗೆ ಅವಾಚ್ಯ ಶಬ್ದ ಬಳಸಿಲ್ಲವೆಂದಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ನೋಡೋಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.

ಮಾಧ್ಯಮಗಳಿಗೆ ನೀಡಿದ ಸಂದರ್ಶನ ವೇಳೆ ಮಾತನಾಡಿದ ಅವರು, ಸಿ.ಟಿ ರವಿ ಅವರು ಆ ರೀತಿ ಹೇಳಿಲ್ಲ ಅನ್ನೋದಾದ್ರೆ, ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ. ಆಣೆ ಮಾಡಲಿಕ್ಕೆ ನಾನೂ ನನ್ನ ಕುಟುಂಬ ಸಮೇತವಾಗಿ ಬರ್ತೀನಿ ಎಂದರು.
ಡಿ.19ರಂದು ಬೆಳಗಾವಿ ಸುವರ್ಣಸೌಧದ ಪರಿಷತ್ ಕಲಾಪದಲ್ಲಿ ಎಂಎಲ್‌ಸಿ ಸಿ.ಟಿ ರವಿ ಅವರು ಅಸಂವಿಧಾನಿಕ ಪದ ಬಳಸಿ ನಿಂದಿಸಿದ್ದಾರೆ ಎಂದು ನಾನು ನಾಟಕ ಮಾಡೋದಕ್ಕೆ ಆಗುತ್ತಾ? ಸದನದಲ್ಲಿ ನಿಂತು ಸುಳ್ಳು ಆರೋಪ ಮಾಡೋದಕ್ಕೆ ಆಗುತ್ತಾ? ಸುಳ್ಳು ಹೇಳೋದಕ್ಕೆ ನನಗೇನು ಹುಚ್ಚಾ? ಎಂದು ಹೆಬ್ಬಾಳ್ಕರ್ ಆಕ್ರೋಶ ಹೊರ ಹಾಕಿದ್ದಾರೆ.



