ಶೇಖ್ ಹಸೀನಾ ಹಸ್ತಾಂತರ ಮಾಡುವಂತೆ ಭಾರತಕ್ಕೆ ಪತ್ರ ಬರೆದ ಬಾಂಗ್ಲಾ
ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾ ದೇಶಕ್ಕೆ ವಾಪಾಸ್ ಕಳುಹಿಸಲು ರಾಜತಾಂತ್ರಿಕ ಟಿಪ್ಪಣಿಯನ್ನು ಭಾರತಕ್ಕೆ ಕಳುಹಿಸಿದೆ.

ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಥವಾ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್, ಬಾಂಗ್ಲಾದೇಶವು ಮಾಜಿ ಪ್ರಧಾನಿಯನ್ನು ನ್ಯಾಯಾಂಗ ಪ್ರಕ್ರಿಯೆಗೆ ಹಿಂತಿರುಗಿಸಲು ಬಯಸುತ್ತದೆ ಎಂದು ಭಾರತ ಸರ್ಕಾರಕ್ಕೆ ಮೌಖಿಕ ಟಿಪ್ಪಣಿಯನ್ನು ಕಳುಹಿಸಿದೆ ಎಂದು ಹೇಳಿದರು.
ಈ ವರ್ಷದ ಆರಂಭದಲ್ಲಿ ಅಧಿಕಾರದಿಂದ ಕೆಳಗಿಳಿದ ಶೇಖ್ ಹಸೀನಾ ಬಾಂಗ್ಲಾದೇಶದಿಂದ ಪರಾರಿಯಾಗಿ ಭಾರತದಲ್ಲಿ ಆಶ್ರಯ ಪಡೆದಿದ್ದರು. ಭಾರತ ದೇಶದಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ನಂತರ ಶೇಖ್ ಹಸೀನಾ ಬಾಂಗ್ಲಾದೇಶವನ್ನು ತೊರೆಯಬೇಕಾಯಿತು.