ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾ ಪೆರುವಾಯಿಯವರಿಗೆ ಮಾಣಿಲ ಪ್ರೌಢ ಶಾಲೆಯಲ್ಲಿ ಸನ್ಮಾನ
ಬಂಟ್ವಾಳ: ಸ್ವಚ್ಛ ವಾಹಿನಿ ಸಾರಥಿ, ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾ ಪೆರುವಾಯಿ ಅವರಿಗೆ ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.
ಗಣ್ಯರು, ಊರವರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸನ್ಮಾನ ಕಾರ್ಯ ನೆರವೇರಿಸಲಾಯಿತು. ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ನಫೀಸಾ ಪೆರುವಾಯಿ ಅವರು ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದರು.