ಬಾಲವನ ಪ್ರಶಸ್ತಿ-2022 ಹಿರಿಯ ರಂಗಕರ್ಮಿ ಅಕ್ಷರ ಕೆ.ವಿ.ಆಯ್ಕೆ
ಪುತ್ತೂರು: ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ| ಶಿವರಾಮ ಕಾರಂತ ಬಾಲವನ, ಪರ್ಲಡ್ಕ, ಸುತ್ತೂರು, ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಪ್ರತಿ ವರ್ಷ ಕೊಡಮಾಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ:-2022ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ ಎಂದು ಬಾಲವನ ಪ್ರಶಸ್ತಿ 2022ರ ಆಯ್ಕೆ ಸಮಿತಿಯ ಅಧ್ಯಕ್ಷರಾದ ಮತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಮತ್ತು ಆಯ್ಕೆ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಗಳು, ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಎಂ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ