ರಾಜ್ಯರಾಷ್ಟ್ರೀಯ

5ಜಿ ಸೇವೆಗೆ ಪ್ರಧಾನಿ ಮೋದಿ ಚಾಲನೆ



ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 5ಜಿ ದೂರಸಂಪರ್ಕ ಸೇವೆಗಳಿಗೆ ಇಂದು (ಅ.1)ರಂದು ಚಾಲನೆ ನೀಡಿದರು.



ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ 5ಜಿ ಸೇವೆಗೆ ಚಾಲನೆ ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಹೆಚ್ಚು ವೇಗದ ಇಂಟರ್ನೆಟ್ ಬಳಕೆ ಆರಂಭವಾಗಿದೆ.


ಆಯ್ದ ನಗರಗಳಲ್ಲಿ 5ಜಿ ದೂರಸಂಪರ್ಕ ಸೇವೆಗೆ ಚಾಲನೆ ನೀಡಲಾಗಿದ್ದು, ಎರಡು ವರ್ಷಗಳಲ್ಲಿ ಇದು ಇಡೀ ದೇಶದಲ್ಲಿ ಹಂತ ಹಂತವಾಗಿ ಲಭ್ಯವಾಗಲಿದೆ.

5ಜಿ ಸೇವೆಗಳು ಆರಂಭವಾಗಿರುವುದರಿಂದ ಹೊಸ ಆರ್ಥಿಕ ಅವಕಾಶಗಳು ತೆರೆದುಕೊಳ್ಳುವ ನಿರೀಕ್ಷೆ ಇದೆ. 5ಜಿ ತಂತ್ರಜ್ಞಾನವು 4ಜಿ ತಂತ್ರಜ್ಞಾನಕ್ಕಿಂತ ಹಲವು ಪಟ್ಟು ಹೆಚ್ಚು ವೇಗದ ಇಂಟರ್ನೆಟ್ ಸಂಪರ್ಕವನ್ನು ಒದಗಿಸುತ್ತದೆ.


ಮುಕೇಶ್ ಅಂಬಾನಿ ಮಾಲೀಕತ್ವದ ಜಿಯೊ, ಸುನೀಲ್ ಭಾರ್ತಿ ಮಿತ್ತಲ್ ಮಾಲೀಕತ್ವದ ಭಾರ್ತಿ ಏರ್‌ಟೆಲ್‌ ಮತ್ತು ವೊಡಾಫೋನ್ ಐಡಿಯಾ ಕಂಪನಿಗಳು 5ಜಿ ಸೇವೆಗಳನ್ನು ಆರಂಭಿಸಲು ಅಗತ್ಯವಿರುವ ತರಂಗಾಂತರಗಳನ್ನು ಹರಾಜಿನ ಮೂಲಕ ಖರೀದಿಸಿವೆ. ಖಾಸಗಿ ನೆಟ್‌ವರ್ಕ್‌ ಸ್ಥಾಪಿಸಲು ಅಗತ್ಯವಿರುವ 5ಜಿ ತರಂಗಾಂತರಗಳನ್ನು ಅದಾನಿ ಸಮೂಹ ಖರೀದಿ ಮಾಡಿದೆ.



ಮೊದಲ ಹಂತದಲ್ಲಿ 13 ಆಯ್ದ ನಗರಗಳಲ್ಲಿ ಮಾತ್ರವೇ 5 ಜಿ ಸೇವೆ ಲಭ್ಯವಾಗಲಿದ್ದು, ಮುಂದಿನ ಎರಡು ವರ್ಷಗಳ ಒಳಗಾಗಿ ದೇಶದಾದ್ಯಂತ ಸೇವೆ ಲಭ್ಯವಾಗಲಿದೆ ಎಂದು ಮೋದಿ ಹೇಳಿದ್ದಾರೆ.

ಯಾವ ನಗರಗಳಿಗೆ 5ಜಿ ಭಾಗ್ಯ?
–ಬೆಂಗಳೂರು
–ಚಂಡೀಗಢ
–ಅಹಮದಾಬಾದ್
–ಗಾಂಧಿನಗರ
–ಗುರುಗ್ರಾಮ
–ಹೈದರಾಬಾದ್
–ಜಾಮ್‌ನಗರ
–ಚೆನ್ನೈ
–ದೆಹಲಿ
–ಕೋಲ್ಕತ್ತ
–ಮುಂಬೈ
–ಪುಣೆ
–ಲಖನೌ

Leave a Reply

Your email address will not be published. Required fields are marked *

error: Content is protected !!