ಚಾಟಿಯಿಂದ ಹೊಡೆದುಕೊಂಡು ಪ್ರತಿಭಟಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
ಚೆನ್ನೈ: ತಮಿಳುನಾಡಿನಲ್ಲಿ ಡಿಎಂಕೆ ಸರಕಾರವನ್ನು ಕೆಳಗಿಳಿಸುವವರೆಗೂ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಗುರುವಾರ ಪ್ರತಿಜ್ಞೆ ಮಾಡಿದ್ದ ಬಿಜೆಪಿ ತಮಿಳುನಾಡು ಅಧ್ಯಕ್ಷ ಕೆ.ಅಣ್ಣಾಮಲೈ ಡಿ.27ರಂದು ತನ್ನ ಮನೆಯ ಮುಂದೆಯೇ ಬಿಜೆಪಿ ಕಾರ್ಯಕರ್ತರ ಎದುರು ಚಾಟಿಯಿಂದ ಬಾರಿಸಿಕೊಂಡಿದ್ದಾರೆ.

ಅಣ್ಣಾ ವಿಶ್ವ ವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಣ್ಣಾಮಲೈ ಮತ್ತು ಡಿಎಂಕೆ ಸರ್ಕಾರದ ನಡುವೆ ಸಂಘರ್ಷ ಜೋರಾಗಿದ್ದು. ಈ ಪ್ರಕರಣದಲ್ಲಿ ಸಂತ್ರಸ್ತೆಯ ವೈಯಕ್ತಿಕ ಮಾಹಿತಿಯನ್ನು ಸೋರಿಕೆ ಮಾಡಲಾಗಿದೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ತಮಿಳುನಾಡಿನಲ್ಲಿ ಮಾತನಾಡಿದ ಅಣ್ಣಾಮಲೈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ “ನಾನು ಈ (ಡಿಎಂಕೆ) ಸರಕಾರವನ್ನು ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ. ನನ್ನ ಮನೆ ಮುಂದೆ ನಿಂತು 6 ಬಾರಿ ನನಗೆ ನಾನೇ ಚಾಟಿಯಿಂದ ಬಾರಿಸಿಕೊಳ್ಳುತ್ತೇನೆ ಎಂದಿದ್ದರು ಅದರಂತೆ ಇಂದು ಬೆಳಿಗ್ಗೆ ತನ್ನ ಮನೆಯ ಮುಂದೆ ನಿಂತು ಆರು ಬಾರಿ ಚಾಟಿಯಿಂದ ಬಾರಿಸಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಂದಿನ 48 ದಿನಗಳು ಉಪವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿಯ ಈ ರೀತಿಯ ಪ್ರತಿಭಟನೆ ಜನರು ವಿವಿಧ ಕಾಮೆಂಟ್ ಗಳನ್ನು ಮಾಡಿದ್ದಾರೆ.