ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ
ಪುತ್ತೂರು: ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆಯನ್ನು ನೀಡಬೇಕು ಆಗ ಮಾತ್ರ ಬದುಕು ಸಾರ್ಥಕವಾಗುವುದು ಈ ನಿಟ್ಟಿನಲ್ಲಿ ಕೆ.ಪಿ.ಅಹ್ಮದ್ ಹಾಜಿಯವರು ಸುಶಿಕ್ಷಿತ ಸಮಾಜ ಕಟ್ಟುವ ಗುರಿಯೊಂದಿಗೆ ಮೂರು ದಶಕಗಳ ಹಿಂದೆ ಶೈಕ್ಷಣಿಕ ಸೇವೆಗಾಗಿ ಮೌಂಟನ್ ವ್ಯೂ ಸಂಸ್ಥೆಯನ್ನು ಕಟ್ಟಿರುವುದು ಸಮಾಜಕ್ಕೆ ಅವರು ನೀಡಿದ ಅಮೂಲ್ಯವಾದ ಕೊಡುಗೆಯಾಗಿದೆ ಎಂದು ಕರ್ನಾಟಕ ಸರಕಾರದ ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು. ಅವರು ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸಾಲ್ಮರ ಪ್ರೌಢಶಾಲೆಯ ವಾರ್ಷಿಕೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮೌಂಟನ್ ವ್ಯೂ ವಿದ್ಯಾ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆಯನ್ನು ಮಾಡಿದ್ದು,ಜಾತಿ,ಧರ್ಮದ ಭೇದವಿಲ್ಲದೆ ಎಲ್ಲರಿಗೂ ಜ್ಞಾನದ ಬೆಳಕನ್ನು ಹರಡಿ ಶೈಕ್ಷಣಿಕ ಪ್ರಗತಿಗೆ ತನ್ನದೇ ಆದ ಕೊಡುಗೆಯನ್ನು ನೀಡಿದೆ ಎಂದು ಶ್ಲಾಘಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಅಹ್ಮದ್ ಹಾಜಿ ಅವರು, ಮೌಂಟನ್ ವ್ಯೂ ಸಂಸ್ಥೆಯು ಮುಂದಿನ ದಿನಗಳಲ್ಲಿ ವಿವಿಧ ಹೊಸ ಹೊಸ ಯೋಜನೆಗಳನ್ನು ಹಾಕಿ ಕೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಪ್ರಗತಿಯನ್ನು ಸಾಧಿಸಲಿದೆ ಹಾಗೂ ಇನ್ನಷ್ಟು ಪ್ರತಿಭಾವಂತರನ್ನು ರೂಪಿಸುವ ಕೆಲಸ ಮಾಡಲಿದೆ ಎಂದರು. ಪುತ್ತೂರು ಪ್ರಸಾದ್ ಇಂಡಸ್ಟ್ರೀಟ್ ನ ಎಚ್.ಶಿವ ಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಯಾವುದೇ ಸಂದರ್ಭದಲ್ಲೂ ನಗುಮುಖದೊಂದಿಗೆ ಮಾತನಾಡಿ, ಎಲ್ಲರೊಂದಿಗೆ ಉತ್ತಮ ಸಂಬಂಧ ಹೊಂದಿರುವ ಕೆ.ಪಿ.ಅಹ್ಮದ್ ಹಾಜಿ ಯವರ ನೇತೃತ್ವದ ಮೌಂಟನ್ ವ್ಯೂ ಸಂಸ್ಥೆಯು ಮುಂದೆ ಇನ್ನಷ್ಟು ಬೆಳಗಲಿ ಎಂದು ಹಾರೈಸಿದರು.
ಸಮಾರಂಭದಲ್ಲಿ ಸುಮಾರು 27 ವರ್ಷಗಳಿಂದ ಸಂಸ್ಥೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಈ ವರ್ಷ ನಿವೃತ್ತಿ ಯಾಗಲಿರುವ ಜಯರಾಮ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದಿಸಿ,ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಸ್ಥೆಯ ಅಧೀನದ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ವಿದ್ಯಾರ್ಥಿನಿಯರ ಶೈಕ್ಷಣಿಕ ಮತ್ತು ಪ್ರತಿಭಾ ಸಾಧನೆಗಾಗಿ ಕಾಲೇಜ್ ನ ಹಳೆ ವಿದ್ಯಾರ್ಥಿನಿಯರ ಒಕ್ಕೂಟ 'ಝುಮ್ರತು ಸ್ವಾಲಿಹಾತ್' ವತಿಯಿಂದ ನೀಡಲಾದ ಕ್ಯಾಶ್ ಅವಾರ್ಡ್ ಮತ್ತು ಸ್ಮರಣಿಕೆಯನ್ನು ಇದೇ ಸಂದರ್ಭದಲ್ಲಿ ಹಸ್ತಾಂತರಿಸಲಾಯಿತು. ಸಮಾರಂಭದಲ್ಲಿ ಅಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್, ಕಾರ್ಯದರ್ಶಿ ಹಾಜಿ ಅಬ್ದುರ್ರಹ್ಮಾನ್ ಅಝಾದ್ ದರ್ಬೆ, ಟ್ರಸ್ಟಿಗಳಾದ ಎಲ್.ಟಿ.ಅಬ್ದುಲ್ ರಝಾಕ್ ಹಾಜಿ ಪುತ್ತೂರು,ಮುಹಮ್ಮದ್ ಬಡಗನ್ನೂರು, ಅನಸ್ ಆಕರ್ಷಣ್, ಶಂಸುದ್ದೀನ್ ಕಲ್ಲೇಗ, ಮುಹಮ್ಮದ್ ಆಯಿಝ್ ಕೂರ್ನಡ್ಕ, ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಸಮಿತಿಯ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ, ಸಾಲ್ಮರ ಕನ್ನಡ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮೋಹನಾಂಗಿ, ಅಸ್ವಾಲಿಹಾ ವುಮೆನ್ಸ್ ಕಾಲೇಜ್ ಮುಖ್ಯಸ್ಥ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ಆಂಗ್ಲ ಮಾಧ್ಯಮ ಶಾಲಾ ರಕ್ಷಕ ,ಶಿಕ್ಷಕ ಸಮಿತಿಯ ಅಧ್ಯಕ್ಷ ಉಸ್ಮಾನ್ ಸಾಲ್ಮರ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಸಂಚಾಲಕ ಮುಹಮ್ಮದ್ ಸಾಬ್ ಹಾಜಿ ಸ್ವಾಗತಿಸಿದರು. ಶಾಲಾ ಶಿಕ್ಷಕ ಮಂಜುನಾಥ ರೈ ವಿವಿಧ ಕಾರ್ಯಕ್ರಮ ನಿರೂಪಿಸಿದರು. ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಝುಲೈಖಾಬಿ ವಾರ್ಷಿಕ ವರದಿ ವಾಚಿಸಿ, ಕೊನೆಗೆ ವಂದಿಸಿದರು. ಶಿಕ್ಷಕರಾದ ಅಶ್ರಫ್, ರವೂಫ್, ಶಿಕ್ಷಕಿಯರಾದ ಸಾಯಿಕ,ರೋಸಿ ಬಿಂದು,ಅಶ್ವಿನಿ, ಪೂರ್ಣಿಮಾ, ವಿಜಯ ರೈ, ಮೊದಲಾದವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿಗಳಾದ ಯೂಸುಫ್ ಮತ್ತು ಅಬ್ದುಲ್ ಹಮೀದ್ ಸಹಕರಿಸಿದರು. ಸಮಾರೋಪ ಸಮಾರಂಭದ ಮೊದಲು ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ನಡೆಯಿತು.
ಉದ್ಘಾಟನಾ ಸಮಾರಂಭ: ಬೆಳಿಗ್ಗೆ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಅಹ್ಮದ್ ಹಾಜಿ ಆಕರ್ಷಣ್ ಅವರು ಧ್ವಜಾರೋಹಣ ನಡೆಸುವ ಮೂಲಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಶಾಲೆಯ ಹಳೆ ವಿದ್ಯಾರ್ಥಿನಿ ಹಾಗೂ ಪುತ್ತೂರು ಪ್ರಗತಿ ಆಸ್ಪತ್ರೆಯ ಡಾ.ರುಕ್ಷನಾ ಇಸ್ಮಾಯಿಲ್, ಸಂಸ್ಥೆಯ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಅಝಾದ್ ದರ್ಬೆ, ಸಂಸ್ಥೆಯ ಮುಖ್ಯ ಶಿಕ್ಷಕಿಯರಾದ ಮೋಹನಾಂಗಿ,ಝುಲೈಖಾಬಿ, ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಉಸ್ಮಾನ್ ಮತ್ತು ಇಸ್ಮಾಯಿಲ್ ಮೊದಲಾದವರು ಭಾಗವಹಿಸಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯು.ಮುಹಮ್ಮದ್ ಹಾಜಿ ಪಡೀಲ್ ಸ್ವಾಗತಿಸಿದರು. ಶಾಲಾ ಶಿಕ್ಷಕ ಅಬ್ದುರ್ರವೂಫ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಸುಲೋಚನ ಕೊನೆಗೆ ವಂದಿಸಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಅಶ್ರಫ್ ಮತ್ತು ಜಯರಾಮ್ ಸಹಕರಿಸಿದರು.
ಸಂಸ್ಥೆಯ ಶಿಕ್ಷಕ ವೃಂದದವರು ಶಿಕ್ಷಕೇತರ ವೃಂದದವರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.



