ರಾಜ್ಯ

PayCM ಟೀ ಶರ್ಟ್ ಧರಿಸಿದ್ದ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆಗೈದ ಪೊಲೀಸ್ ಅಧಿಕಾರಿಯ ಕೃತ್ಯ ಖಂಡನೀಯ- ಸಿದ್ದರಾಮಯ್ಯ

ಮೈಸೂರು: PayCM ಟೀ ಶರ್ಟ್ ಧರಿಸಿದ್ದ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಬೀದಿ ಗೂಂಡಾನಂತೆ ಹಲ್ಲೆಗೈದ ಪೊಲೀಸ್ ಅಧಿಕಾರಿಯ ಕೃತ್ಯ ಖಂಡನೀಯ.

ಆ ಪೋಲಿಸನನ್ನು
ಈ ಕೂಡಲೇ ಅಮಾನತು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್..
ಕರ್ನಾಟಕದಲ್ಲಿ ಯುಪಿ ಮಾದರಿ ಆಡಳಿತ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದರು. ಪೊಲೀಸರು ಅದನ್ನು ಅನುಷ್ಠಾನಗೊಳಿಸಲು
ಹೊರಟಂತಿದೆ.
40% ಭ್ರಷ್ಟಾಚಾರದ ವಿರುದ್ಧದ ನಮ್ಮ ಪಕ್ಷದ ಅಭಿಯಾನವನ್ನು ಎದುರಿಸುವ ಧಮ್ಮು-ತಾಕತ್ ಬಿಜೆಪಿಗೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದ ಪಕ್ಷ ಪೊಲೀಸರ ಮೂಲಕ ದಮನಿಸುವ ಹೇಡಿತನಕ್ಕೆ ಇಳಿದಿದೆ.
ಭ್ರಷ್ಟಾಚಾರದ ವಿರುದ್ಧದ ಅಭಿಯಾನ ಅಪರಾಧ ಎಂದು ಯಾವ ಕಾನೂನಿನಲ್ಲಿ ಹೇಳಿದೆ?

ಮುಖ್ಯಮಂತ್ರಿಗಳೇ, ನಮ್ಮ ವಿರುದ್ದ ಕೊಳಕು ಭಾಷೆಯ ಜಾಹೀರಾತು ನೀಡಿದ್ದೀರಿ, ಅದನ್ನು ನಾವು ಹರಿದುಹಾಕಲು ಹೋಗುವುದಿಲ್ಲ. ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜ್ಯದ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಶುರುಮಾಡಿದ್ದಾರೆ.
ಇದು ವಿಕೋಪಕ್ಕೆ ಹೋಗಿ ಜನರೇ ಪೊಲೀಸರ ವಿರುದ್ದ ತಿರುಗಿ ಬೀಳುವಂತಹ ಪರಿಸ್ಥಿತಿಯನ್ನು ದಯವಿಟ್ಟು ಸೃಷ್ಟಿ ಮಾಡಬೇಡಿ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಕರ್ನಾಟಕ ಶಾಂತಿಪ್ರಿಯರ ನಾಡು, ಇದನ್ನು ಪೊಲೀಸ್ ರಾಜ್ಯ ಮಾಡಲು ಹೋಗಬೇಡಿ.
ಯಾವ ಸರ್ಕಾರವೂ ಶಾಶ್ವತ ಅಲ್ಲ, ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾದೀತು ಎಂದವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!