ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಎಲ್ಲಾ 12 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಜಯಭೇರಿ
ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಜ.1ರಂದು ಮತದಾನ ನಡೆದು ಬಳಿಕ ಮತ ಎಣಿಕೆ ನಡೆದಿದ್ದು ಎಲ್ಲಾ 12 ಸ್ಥಾನಗಳಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಪ್ರಸ್ತುತ ಸಂಘದಲ್ಲಿ ಎಲ್ಲಾ 12 ಸ್ಥಾನಗಲ್ಲೂ ಬಿಜೆಪಿ ಬೆಂಬಲಿತರು ನಿರ್ದೇಶಕರಾಗಿದ್ದು ಇದೀಗ ಮತ್ತೊಮ್ಮೆ ಬಿಜೆಪಿ ಪಾರಮ್ಯ ಮೆರೆದಿದೆ. ಗೆಲುವಿನ ನಿರೀಕ್ಷೆಯೊಂದಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿ ಸೋಲನುಭವಿಸುವ ಮೂಲಕ ಮತ್ತೊಮ್ಮೆ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ ವೇಳೆ ಪಕ್ಷದ ಪ್ರಮುಖರು ಆಗಮಿಸಿ ವಿಜೇತರನ್ನು ಅಭಿನಂದಿಸಿದರು.