ಕೊಕ್ಕಡದಲ್ಲಿ ನಡೆದ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣಾ ಅ ಕ್ರ 72/2024 ಕಲಂ:305 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಬೆಳ್ತಂಗಡಿ ಗ್ರಾಮಾಂತರ ವೃತ್ತನಿರೀಕ್ಷಕರ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣಾ ಅಧಿಕಾರಿ/ ಸಿಬ್ಬಂದಿಗಳ ತನಿಖಾ ತಂಡವು ಡಿ.30ರಂದು ಆರೋಪಿಗಳಾದ ಮಹಮ್ಮದ್ ಇಕ್ಬಾಲ್ ಮತ್ತು ಮಹಮ್ಮದ್ ಶಹಬಾದ ಎಂಬವರುಗಳನ್ನು ಬಾಡಿ ವಾರೆಂಟ್ ನಲ್ಲಿ ಪೊಲೀಸರು ವಶಕ್ಕೆ ಪಡೆದು, ಪ್ರಕರಣದ ತನಿಖೆಯನ್ನು ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದು, ಅವರಿಂದ ರೂ 20000/- ಹಣವನ್ನು ಸ್ವಾದೀನಪಡಿಸಿಕೊಂಡಿರುತ್ತಾರೆ.
ಆರೋಪಿಗಳನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.