ಸಿ ಎಂ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ
ಪುತ್ತೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರನ್ನು ಜ.2ರಂದು ಭೇಟಿಯಾದ ಶಾಸಕ ಅಶೋಕ್ ಕುಮಾರ್ ರೈ ಅವರು ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಮುಂಬರುವ ಬಜೆಟ್‌ನಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿ ಅನುದಾನ ಮತ್ತು ವಿವಿಧ ಯೋಜನೆಗಳಿಗೆ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಪುತ್ತೂರಿನ ಪ್ರಮುಖ ಬೇಡಿಕೆಯಾದ ಮೆಡಿಕಲ್ ಕಾಲೇಜು ಸೇರಿದಂತೆ ಕೆಲವೊಂದು ಪ್ರಮುಖ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಅರ್ದ ತಾಸು ಮಾತುಕತೆ ನಡೆಸಿದ್ದಾರೆ. ಶಾಸಕ ಅಶೋಕ್ ರೈ ಅವರ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ಭರವಸೆಯನ್ನು ನೀಡಿದ್ದಾರೆ.