ಜ.5: ಸರ್ವೆ ಕಲ್ಪಣೆಯಲ್ಲಿ ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಗೆ ಸನ್ಮಾನ
ಪುತ್ತೂರು: ಸರ್ವೆ ಸೌಹಾರ್ದ ವೇದಿಕೆ ವತಿಯಿಂದ ಸರ್ವೆ ಪ್ರೇಮಿಯರ್ ಲೀಗ್ ಕ್ರಿಕೆಟ್ ಸೀಸನ್-9, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಜನವರಿ 5ರಂದು ಸರ್ವೆ ಕಲ್ಪನೆ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ.

ಸಮಾರೋಪ ಸಮಾರಂಭ ಸಂಜೆ ನಡೆಯಲಿದ್ದು ಅದರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ