ಮಹಿಳೆಯೊಂದಿಗೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ಡಿವೈಎಸ್ಪಿ ಅಮಾನತು
ತುಮಕೂರು: ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ತಮ್ಮ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ಆರೋಪ ಡಿವೈಎಸ್ಪಿ ಮೇಲಿದೆ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಡಿಜಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.