ಮುಂಡೂರು ಗ್ರಾ.ಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಂಜೀವ ಪೂಜಾರಿ ಕುರೆಮಜಲು ನಿಧನ
ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಂಜೀವ ಪೂಜಾರಿ ಕುರೆಮಜಲು ನಿಧನರಾಗಿದ್ದಾರೆ.
ಜ.2ರಂದು ಸಂಜೆ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಜ.3ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.