ತಿರುಪತಿಯಲ್ಲಿ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ
ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಇನ್ನೂ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ.

ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ ಪರಿಣಾಮ ನೂಕುನುಗ್ಗಲು ಉಂಟಾಯಿತು. ಘಟನೆಯಲ್ಲಿ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ