ಸಾಲ್ಮರ ಮೌಂಟನ್ ವ್ಯೂ ನಲ್ಲಿ ಮೀಫ್ ನಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ
ಪುತ್ತೂರು: ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ ದ.ಕ.ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ವತಿಯಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯೆನೆಪೋಯ ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಬಹ್ರೇನ್ ಇದರ ನಿರ್ದೇಶಕರಾದ ಸಿನಾನ್ ಝಕರಿಯಾ ಅವರು ಮಾತನಾಡಿ, ಶಿಕ್ಷಣವು ಭವಿಷ್ಯವನ್ನು ಬದಲಾಯಿಸುವ ಅತೀ ದೊಡ್ಡ ಸಂಪತ್ತಾಗಿದೆ ಎಸ್.ಎಸ್.ಎಲ್.ಸಿ. ಎಂಬುದು ಇದರ ಮೊದಲ ಮೆಟ್ಟಿಲಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿ ಪರೀಕ್ಷೆ ಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ನಿರಂತರ ಕಲಿಕೆ ಹಾಗೂ ಶ್ರಮ ವಹಿಸಬೇಕೆಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ವಿದ್ಯಾರ್ಥಿಗಳು ಇಂದಿನದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಿದ್ಧರಾಗಬೇಕು ಅದಕ್ಕೆ ಪ್ರಯತ್ನ ಅಗತ್ಯ ಎಂದು ಅವರು ಹೇಳಿದರು.
ಸಮಾರಂಭದಲ್ಲಿ ಮೀಫ್ ಅಧ್ಯಕ್ಷ ಮೂಸಬ್ಬ ಹಾಜಿ, ಉಪಾಧ್ಯಕ್ಷ ಮುಸ್ತಫಾ ಸುಳ್ಯ, ಕನ್ವಿನರ್ ಜಿ.ಎಂ.ಅನ್ವರ್ ಹುಸೈನ್, ಮೌಂಟನ್ ವ್ಯೂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್, ಸಂಚಾಲಕ ಮುಹಮ್ಮದ್ ಸಾಬ್ ಹಾಜಿ , ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ಸಾಲ್ಮರ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮೋಹನಾಂಗಿ ಮೊದಲಾದವರು ಉಪಸ್ಥಿತರಿದ್ದರು.
ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಜುಲೈಖಾಬಿ ಸ್ವಾಗತಿಸಿದರು. ಶಿಕ್ಷಕ ರವೂಫ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು ದೈಹಿಕ ಶಿಕ್ಷಣ ಶಿಕ್ಷಕ ಅಶ್ರಫ್ ವಂದಿಸಿದರು.





