ಶಿಕ್ಷಕ, ಖ್ಯಾತ ನಿರೂಪಕ ಬಾಲಕೃಷ್ಣ ರೈ ಪೊರ್ದಾಲ್ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಆಯ್ಕೆ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆಯಾಗಿದ್ದಾರೆ.

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು ಬಹುಮುಖ ಪ್ರತಿಭಾವಂತ ಯುವ ಸಾಧಕ. ರಂಗ ಕಲಾವಿದನಾಗಿಯೂ ಗುರುತಿಸಿಕೊಂಡಿದ್ದಾರೆ.