ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರ ಕುಟುಂಬಕ್ಕೆ 3 ಹಸು ಕೊಡಿಸಿದ ಸಚಿವ ಝಮೀರ್ ಅಹ್ಮದ್
ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ದುಷ್ಕರ್ಮಿಗಳು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮೂರು ಹಸುಗಳನ್ನು ಕೊಡಿಸಿದ್ದಾರೆ.
ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.
ಈ ವೇಳೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.