ಪಿ.ಎಫ್.ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬಿರ್ ಅರಿಯಡ್ಕಗೆ ಜಾಮೀನು
ಪುತ್ತೂರು:ಶಾಂತಿ ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀ ಅರಿಯಡ್ಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಜಾಬೀರ್ ಅರಿಯಡ್ಕ ಅವರನ್ನು ಸೆ.27ರಂದು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿ ತಾಲೂಕು ದಂಡಾಧಿಕಾರಿ ನಿಸರ್ಗಪ್ರಿಯ ಅವರ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ಜಾಬೀರ್ ಅವರಿಂದ ಮುಚ್ಚಳಿಕೆ ಬರೆಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶಾಂತಿ ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ ಪಿಎಫ್‌ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತಾಲೂಕು ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದರು. ಅದರಂತೆ ಜಾಬೀ ಅರಿಯಡ್ಕ ಅವರನ್ನೂ ಪೊಲೀಸರು ವಶಕ್ಕೆ ಪಡೆದು ತಾಲೂಕು ದಂಡಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದರು.
ಪಿಎಫ್‌ಐನ ಪುತ್ತೂರು ಜಿಲ್ಲಾ ಘಟಕದ ಅಧ್ಯಕ್ಷ ಜಾಬೀ ಅರಿಯಡ್ಕ, ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಬಂಟ್ವಾಳ ಇಜಾಜ್ ಅಹಮದ್ ಸೇರಿದಂತೆ ಒಟ್ಟು 14 ಮಂದಿಯನ್ನು ಪೊಲೀಸರು ಭಾರತೀಯ ದಂಡ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 107 ಹಾಗೂ 151ರ ಆಡಿ ಬಂಧಿಸಿ ತಾಲ್ಲೂಕು ದಂಡಾಧಿಕಾರಿ ಮುಂದೆ ಹಾಜರುಪಡಿಸಿದ್ದರು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.