ಕರಾವಳಿಕ್ರೈಂಜಿಲ್ಲೆ

ಚಿನ್ನದಂಗಡಿ ತೆರೆಯುತ್ತಿದ್ದೇನೆ ಆಶೀರ್ವಾದ ಮಾಡಿ ಎಂದ ಅಪರಿಚಿತ- ಮಹಿಳೆಯ ಮೂರೂವರೆ ಪವನ್ ಚಿನ್ನದ ಸರ ಮಾಯ

ಉಪ್ಪಿನಂಗಡಿ: ಜಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ, ಆಶೀರ್ವಾದ ಮಾಡಿ ಎಂದು ಎನಂತಿಸುತ್ತಾ, ಮಂಕುಬೂದಿ ಎರಚಿ ಆರ್ಚಕರ ಪತ್ನಿಯ ಕತ್ತಿನಲ್ಲಿದ್ದ ಮೂರುವರೆ ಪವನ್ ತೂಕದ ಮಾಂಗಲ್ಯ ಸರವನ್ನು ಎಗರಿಸಿದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ .

ಉಪ್ಪಿನಂಗಡಿಯ ರಥಬೀದಿಯಲ್ಲಿರುವ ದೇವಾಲಯವೊಂದಕ್ಕೆ ಹೋಗುವ ದಾರಿಯಲ್ಲಿನ ಅರ್ಚಕರ ಮನೆ ಬಾಗಿಲಿಗೆ ಬಂದ ಹಿಂದಿ ಭಾಷಿಗೆ ವ್ಯಕ್ತಿಯೋರ್ವ ಮನೆಯಲ್ಲಿದ್ದ ಅರ್ಚಕರ ಪತ್ನಿಯಲ್ಲಿ ತನಗೆ ಸೂತಕವಿರುವುದರಿಂದ ದೇವಾಲಯಕ್ಕೆ ಹೋಗಲಾಗುವುದಿಲ್ಲ. ದೇವರಿಗೆ ಹರಕೆ ರೂಪದಲ್ಲಿ ತನ್ನ ಪರವಾಗಿ ಮುನ್ನೂರು ರೂಪಾಯಿ ಸಲ್ಲಿಸಿ ಎಂದು ತಲಾ 100 ರೂಪಾಯಿಯ 3 ನೋಟುಗಳನ್ನು ನೀಡಿ, ಬಳಿಕ ಅದರಲ್ಲಿ ಒಂದು ನೋಟನ್ನು ವಾಪಾಸು ಪಡೆದಿರುತ್ತಾನೆ. ಹೀಗೆ ಹಿಂಪಡೆದ ನೋಟನ್ನು ಮತ್ತೆ ಅವರ ಕೈಗಿತ್ತು ನಿಮ್ಮ ಮಾಂಗಲ್ಯ ಸರವನ್ನು ಅದಕ್ಕೆ ಸ್ಪರ್ಶಿಸಿ ಹಣವನ್ನು ಹಿಂತಿರುಗಿಸಲು ವಿನಂತಿಸುತ್ತಾನೆ. ಈ ವೇಳೆ ನನ್ನ ಮಾಂಗಲ್ಯ ಸರವನ್ನು ನಿಮ್ಮ ನೋಟಿಗೆ ಯಾಕೆ ಸ್ಪರ್ಶಿಸಬೇಕೆಂದು ಅರ್ಚಕರ ಪತ್ನಿ ಪ್ರಶ್ನಿಸುತ್ತಾರೆ. ಅದಕ್ಕೆ ನಾನು ಊರಿನಲ್ಲಿ ಚಿನ್ನಾಭರಣದ ಅಂಗಡಿಯನ್ನು ತೆರೆಯಲಿದ್ದೇನೆ. ಪತಿ ವೃತೆಯ ಮಾಂಗಲ್ಯ ಸರವನ್ನು ಸ್ಪರ್ಶಿಸಿದ ಹಣವನ್ನು ಅಂಗಡಿಯೊಳಗಿಸಲು ಸೂಚಿಸಿದ್ದಾರೆ. ಅದಕ್ಕಾಗಿ ನಿಮ್ಮ ಮಾಂಗಲ್ಯ ಸರವನ್ನು ಈ ನೋಟಿಗೆ ಸ್ಪರ್ಶಿಸಿ ನೀಡಿ ಎಂದು ವಿನಂತಿಸುತ್ತಾನೆ.

ಆತನ ಮಾತನ್ನು ಸತ್ಯವೆಂದು ನ೦ಬಿದ ಮಹಿಳೆ ತನ್ನ ಮಾಂಗಲ್ಯವನ್ನು ಹಣಕ್ಕೆ ಸ್ಪರ್ಶಿಸುತ್ತಾರೆ, ಅದಕ್ಕೆ ಆತ, ಆ ರೀತಿಯಲ್ಲ ಮಾಂಗಲ್ಯ ಸರವನ್ನು ಸಂಪೂರ್ಣ ತೆಗೆದು ಅದನು ಒಮ್ಮೆ ನೋಟಿನಲ್ಲಿಟ್ಟು ಕೊಡಿ ಎಂದು ತಿಳಿಸಿದಾಗ ಮಹಿಳೆಯು ಅದೇ ರೀತಿ ಮಾಡಿ ನೋಟನ್ನು ಆತನ ಕೈಯಲ್ಲಿ ನೀಡುತ್ತಾರೆ. ಈ ವೇಳೆ ಸ್ಥಳದಲ್ಲಿ ಏನಾಗುತ್ತದೆ ಎಂದು ಅರಿವಾಗುವಷ್ಟರಲ್ಲಿ ಆ ವ್ಯಕ್ತಿ ಸ್ಥಳದಿಂದ ನಿರ್ಗಮಿಸಿರುತ್ತಾನೆ. ಒಂದಷ್ಟು ಹೊತ್ತು ಕಳೆದ ಮೇಲೆ ವಾಸ್ತವ ಸ್ಥಿತಿಗೆ ಬಂದ ಮಹಿಳೆ ತನ್ನ ಮಾಂಗಲ್ಯ ಸರ ಕೊರಳಲ್ಲಿ ಇಲ್ಲದಿರುವುದನ್ನು ಕಂಡು ಬೊಬ್ಬೆ ಹೊಡೆದಾಗಲೇ ಅಪರಿಚಿತ ವ್ಯಕ್ತಿಯೋರ್ವ ಮಂಕುಬೂದಿ ಎರಚಿ ತನ್ನ ಮಾಂಗಲ್ಯ ಸರ ಎಗರಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!