ಉಪ್ಪಿನಂಗಡಿ: ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು
ಉಪ್ಪಿನಂಗಡಿ: ಒಂದೂವರೆ ಕೆಜಿ ಗಾಂಜಾವನ್ನು ರಿಕ್ಷಾದಲ್ಲಿ ಸಾಗಿಸುತ್ತಿದ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
31ನೇ ನೆಕ್ಕಿಲಾಡಿಯಲ್ಲಿ ಎಸ್‌ಐ ಅವಿನಾಶ್ ಎಚ್. ಮತ್ತವರ ತಂಡ ವಾಹನ ತಪಾಸಣೆ ಮಾಡುತ್ತಿದ್ದಾಗ ಬಂಟ್ವಾಳದ ಕಡೆಯಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ರಿಕ್ಷಾವನ್ನು ನಿಲ್ಲಿಸಲು ಸೂಚಿಸಿದ್ದು. ಆದರೆ ಚಾಲಕ ವಾಹನವನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿ ರಿಕ್ಷಾದಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಅಬ್ದುಲ್ ಸಲೀಂ (35 ವ) ಆರೋಪಿ ರಿಕ್ಷಾ ಚಾಲಕ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸಾಗಿಸುತ್ತಿದ್ದುದು ತಿಳಿದು ಬಂದಿದೆ. ನೌಶಾದ್ ಎಂಬಾತ ತನಗೆ ಗಾಂಜಾ ನೀಡಿದ್ದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.