ಸೈಫ್ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಣ: ಆರೋಪಿಯನ್ನು ಬಂಧಿಸಿದ ಮುಂಬೈ ಪೊಲೀಸರು
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಆರೋಪಿಯನ್ನು ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಬಂಧಿತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಬಾಂದ್ರಾ ಪೊಲೀಸ್ ಠಾಣೆಗೆ ಶಂಕಿತ ವ್ಯಕ್ತಿಯನ್ನು ಪೊಲೀಸರು ಕರೆತರುತ್ತಿರುವುದು ಕಂಡು ಬಂದಿದ್ದು, ನಟನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದ ವ್ಯಕ್ತಿ ಈತನೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.