ಸರ್ವೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಪುತ್ತೂರು: ಸರ್ವೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಖಾಸಗಿ ವ್ಯಕ್ತಿಯೊಬ್ಬರ ತೋಟಕ್ಕೆ ನುಗ್ಗಿದ ಘಟನೆ ಬೆಳಗ್ಗಿನ ಜಾವ ನಡೆದಿದೆ. ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಯಿತು.
ಸೋಂಪಾಡಿ ನಿವಾಸಿಯೋರ್ವರು ಅವರ ಪತ್ನಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ತೋಟಕ್ಕೆ ಮಗುಚಿ ಬಿದ್ದಿದೆ. ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.