ಕುಂಬ್ರ ವರ್ತಕರ ಸಂಘದ ಅಧ್ಯಕ್ಷರಾಗಿ ಉದ್ಯಮಿ ಪಿ.ಕೆ ಮುಹಮ್ಮದ್ ಕೂಡುರಸ್ತೆ ಆಯ್ಕೆ
ಪುತ್ತೂರು: ಕುಂಬ್ರ ವರ್ತಕರ ಸಂಘದ ಅಧ್ಯಕ್ಷರಾಗಿ ಉದ್ಯಮಿ ಪಿ.ಕೆ ಮುಹಮ್ಮದ್ ಕೂಡುರಸ್ತೆ ಆಯ್ಕೆಯಾಗಿದ್ದಾರೆ.

ಜ.21ರಂದು ಕುಂಬ್ರದಲ್ಲಿ ನಡೆದ ವರ್ತಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪಿ.ಕೆ ಮುಹಮ್ಮದ್ ಕೂಡುರಸ್ತೆ ಅವರು ಉದ್ಯಮಿಯಾಗಿದ್ದು ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಅನೇಕ ಸಂಘ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಇವರು ಸರ್ವೆ ಗ್ರಾಮದ ಕೂಡುರಸ್ತೆಯಲ್ಲಿ ವಾಸವಾಗಿದ್ದಾರೆ.