ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಲು ಕುಮಾರಸ್ವಾಮಿ ಆಗ್ರಹ
ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿ ತಡೆಗಟ್ಟಲು ಸರಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು, ಇದನ್ನು ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇಂಥ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು ಋಣಮುಕ್ತ ಕಾಯ್ದೆ ಜಾರಿಗೆ ತಂದೆ. ನಮ್ಮ ಸರಕಾರ ಹೋಯಿತು, ಆ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಿದರು ಎಂದು ಅವರು ಬೇಸರ ವ್ಯಕ್ತಪಡಿಸಿದರು.