ನರಭಕ್ಷಕ ಹುಲಿ ಶವವಾಗಿ ಪತ್ತೆ: ಹೊಟ್ಟೆಯಲ್ಲಿ ಬಟ್ಟೆ, ಕಿವಿಯೋಲೆ ಪತ್ತೆ
ಕೇರಳದಲ್ಲಿ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿ ಶವವಾಗಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹುಲಿಯ ಹೊಟ್ಟೆಯಲ್ಲಿ ಬಟ್ಟೆ, ಕಿವಿಯೋಲೆ ಪತ್ತೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಾಫಿ ಬೀಜ ಸಂಗ್ರಹಿಸಲು ತೆರಳಿದ್ದ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿತ್ತು.
ಪಿಲಕಾವುವಿನ ಜನನಿಬಿಡ ಪ್ರದೇಶದ ಮನೆಯೊಂದರ ಹಿಂದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ನಂತರ, ಅರಣ್ಯ ಅಧಿಕಾರಿಗಳು ಹುಲಿಯ ಕುತ್ತಿಗೆಯಲ್ಲಿ ಹೊಸತಾದ ಮತ್ತು ಆಳವಾದ ಗಾಯಗಳು ಪತ್ತೆಯಾಗಿದ್ದು ಅದು ಸಾವಿಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಕಾಡಿನಲ್ಲಿ ಮತ್ತೊಂದು ಹುಲಿಯೊಂದಿಗೆ ಕಾದಾಟದ ಸಂದರ್ಭದಲ್ಲಿ ಈ ಗಾಯಗಳು ಸಂಭವಿಸಿವೆ ಎಂದು ಹೇಳಲಾಗುತ್ತಿದೆ. ಹುಲಿಯ ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಕೂದಲು, ಬಟ್ಟೆ ಮತ್ತು ಕಿವಿಯೋಲೆಗಳು ಅದರ ಹೊಟ್ಟೆಯಲ್ಲಿ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.