ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ: ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಎಂದು ಅವರು ತಿಳಿಸಿದ್ದಾರೆ.

ಪ್ರಕರಣವನ್ನು ಸಿಬಿಐಗೆ ವಹಿಸಬಹುದೆಂಬ ಆತಂಕವಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ನನಗೇಕೆ ಆತಂಕವಾಗಬೇಕು. ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ ಎಂದರು. ಇ. ಡಿ ನೋಟೀಸು ಜಾರಿ ಮಾಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತನಿಖೆ ನಡೆಯುತ್ತಿದ್ದು, ಸಿಬಿಐ ಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದರು.