ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸಾಧ್ಯವಿಲ್ಲ: ಡಿಕೆ ಶಿವಕುಮಾರ್
ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ
ದೇಶ. ಇಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಹರಿಯಾಣ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು. ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ವೈಯಕ್ತಿಕ ಜೀವನವಿರುತ್ತದೆ. ಇಡೀ ದೇಶದಲ್ಲಿ ಜಾರಿ ಮಾಡಲು ಸಾಧ್ಯವಿಲ್ಲದ್ದು, ಒಂದು ರಾಜ್ಯದಲ್ಲಿ ಜಾರಿ ಮಾಡಲು ಹೇಗೆ ಸಾಧ್ಯ?” ಎಂದು ಅವರು ಪ್ರಶ್ನಿಸಿದರು.